ಮೈಸೂರು –ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ- ಬಾಲಕಿ ಸೇರಿದಂತೆ ಇಬ್ಬರು ದುರ್ಮರಣ…

54
firstsuddi

ಚನ್ನಪಟ್ಟಣ: ಮೈಸೂರು –ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕಿ ಸೇರಿದಂತೆ ಇಬ್ಬರು ದುರ್ಮರಣ ಹೊಂದಿರುವ ಘಟನೆ ತಾಲೂಕಿನ ದೇವರಹೊಸಳ್ಳಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ 13 ವರ್ಷದ ಬಾಲಕಿ ಹಾಗೂ 20 ವರ್ಷದ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹೆಚ್.ಡಿ.ಕೋಟೆಯಿಂದ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಿಂದಾಗಿ ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯ ಹಾಗೂ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂಬುದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.