ಮೈಸೂರು ಮೂಲದ ಗೀತಾ ಗೋಪಿನಾಥ್ ಗೆ ಐಎಂಎಫ್‌ನ ಹುದ್ದೆಗೆ ಬಡ್ತಿ…

77
firstsuddi

ವಾಷಿಂಗ್ಟನ್ : ಮೈಸೂರು ಮೂಲದವರಾದ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಐಎಂಎಫ್‌ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.

ಐಎಂಎಫ್ ನ ಹಾಲಿ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಜೆಫ್ರಿ ಒಕಾಮೊಟೊ ಅವರ ಅಧಿಕಾರವಧಿ 2022ರ ಮೊದಲ ತಿಂಗಳು ಮುಕ್ತಾಯವಾಗಲಿದೆ. ಆ ಸ್ಥಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿರುವ ಗೀತಾ ಗೋಪಿನಾಥ್ ಅವರಿಗೆ ಐಎಂಎಫ್‌ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಗುತ್ತಿದೆ ಎಂದು ಐಎಂಎಫ್ ಪ್ರಕಟಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ, ಐಎಂಎಫ್ ಗೆ ಗೀತಾ ಗೋಪಿನಾಥ್ ಅವರ ಅವರ ಕೊಡುಗೆ ಅಸಾಧಾರಣವಾಗಿದೆ. ಜಾಗತಿಕ ಆರ್ಥಿಕತೆಗೆ ಮತ್ತು ಐಎಂಎಫ್ ಗೆ ಸಹಾಯ ಮಾಡಲು ಗೀತಾ ಅವರ ಬೌದ್ಧಿಕ ನಾಯಕತ್ವವು ಸಹಕಾರ ನೀಡಿದೆ. ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ತಿರುವುಗಳಲ್ಲಿ ಅವರು ಅದ್ಭುತವಾಗಿ ಶ್ರಮವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.