ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪುನೀತ್ ಅವರ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಈ ಗೌರವವನ್ನು ಸ್ವೀಕರಿಸಿದರು.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆದ 102ನೇ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಲಾಗಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪುನೀತ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಟುಂಬದವರು ಉಪಸ್ಥಿತರಿದ್ದರು.










