ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ…

70
firstsuddi

ಮೈಸೂರು : ನಾಳೆಯಿಂದ ಪ್ರಾರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 13ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಹ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ತಿಳಿಸಿದ್ದಾರೆ.

ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು.