ಮೊಟೆರಾ ಸ್ಟೇಡಿಯಂಗೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ…

233
First Suddi

ಅಹ್ಮದಾಬಾದ್ : ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣಗೊಳಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉದ್ಘಾಟಿಸಿದರು.

ಈ ಹಿಂದೆ ಸರ್ದಾರ್ ವಲ್ಲಭಾಯಿ ಪಟೇಲ್ ಎಂದು ಕರೆಯಲಾಗುತ್ತಿದ್ದ ಕ್ರೀಡಾಂಗಣವನ್ನು ನವೀಕರಿಸಲಾಗಿದ್ದು ಇದೇ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಲಾಗಿದೆ. 11 ಮಣ್ಣಿನ ಪಚ್‍ಗಳಿರುವ ಮೊಟೆರೊ ಕ್ರೀಡಾಂಗಣದಲ್ಲಿ ಆರು ಪಿಚ್ ಕೆಂಪು ಮಣ್ಣಿನಿಂದ ಮಾಡಲ್ಪಟ್ಟಿದ್ದರೆ, 5 ಪಿಚ್‍ಗಳನ್ನು ಕಪ್ಪು ಮಣ್ಣಿನಿಂದ ಮಾಡಲಾಗಿದೆ. ಇಂದು ಇದೇ ಕ್ರಿಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ನಡೆಯಲಿದ್ದು, ಮೊಟೆರೊ ಕ್ರೀಡಾಂಗಣದಲ್ಲಿ ನಡೆಸುತ್ತಿರುವ ಮೊದಲ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ಇದಾಗಲಿದೆ.

ನೂತನ ಕೀಡಾಂಗಣ ಉದ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ಗುಜರಾತ್ ಗವರ್ನರ್ ಆಚಾರ್ಯ ದೇವರತ್, ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು, ಬಿಸಿಸಿಐ ಸೆಕ್ರೆಟರಿ ಜಯ್ ಶಾ ಉಪಸ್ಥಿತರಿದ್ದರು. ಗೃಹ ಸಚಿವ ಅಮಿತ್ ಶಾ ಅಧಿಕೃತವಾಗಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಘೋಷಿಸಿದರು.