ಮೊಬೈಲ್ ಚಾರ್ಜರ್ ವೈಯರ್ ನಿಂದ ವಿದ್ಯುತ್ ಪ್ರವಹಿಸಿ ಎಂಟು ತಿಂಗಳ ಮಗು ಸಾವು…

55
firstsuddi

ಉತ್ತರ ಕನ್ನಡ: ಮೊಬೈಲ್ ಚಾರ್ಜರ್ ವೈಯರ್ ನಿಂದ ವಿದ್ಯುತ್ ಪ್ರವಹಿಸಿ 8 ತಿಂಗಳ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ವಿದ್ಯುತ್ ಶಾಕ್‌ಗೆ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಈ ವೇಳೆ ಆನ್ಇದ್ದ ಚಾರ್ಜರ್​ ಅನ್ನು ಮಗು ಬಾಯಲ್ಲಿಟ್ಟುಕೊಂಡಿದ್ದು ಕೂಡಲೇ ಶಾಕ್​ನಿಂದ ಸಾವನ್ನಪ್ಪಿದೆ.

ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.