ಮೊಬೈಲ್ ಬಳಸದಂತೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ…

44
firstsuddi

ಚಿಕ್ಕಬಳ್ಳಾಪುರ: ಮೊಬೈಲ್​ನಲ್ಲೇ ಹೆಚ್ಚು ಸಮಯ ಕಳೆಯಬೇಡ. ಅದರ ಬದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೌರಿಬಿದನೂರು ಸಮೀಪದ ಚಿತ್ತವಾಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲೋಕೇಶ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ 9ನೇ ತರಗತಿಯಲ್ಲಿ ಓದುತ್ತಿದ್ದನು. ಲೋಕೇಶ್‌ನ ತಂದೆ ತನ್ನ ಮಗ ಹೆಚ್ಚಿನ ಸಮಯವನ್ನು ಮೊಬೈಲ್ ಫೋನ್‌ನಲ್ಲಿ ಕಳೆಯುವುದರ ಬಗ್ಗೆ ಚಿಂತಿತರಾಗಿದ್ದರು ಮತ್ತು ಆತ ಅಧ್ಯಯನದತ್ತ ಗಮನ ಹರಿಸಬೇಕೆಂದು ಬಯಸಿದ್ದರು.

ಇದೇ ವಿಚಾರವಾಗಿ ಸೋಮವಾರ, ತಂದೆ ಮೊಬೈಲ್ ಬಳಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ, ಇಬ್ಬರೂ ಜಗಳವಾಡಿದ್ದಾರೆ. ಈ ವೇಳೆ ಬಾಲಕ ಕೋಪದಿಂದ ಮನೆಯಿಂದ ಹೊರಬಂದಿದ್ದಾನೆ.

ಬಳಿಕ ಗ್ರಾಮದ ನಿರ್ಜನ ಪ್ರದೇಶಕ್ಕೆ ತೆರಳಿದ ಲೋಕೇಶ್, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.