ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು…

63
firstsuddi

ಜಾರ್ಖಂಡ್: ಮೊಹರಂ ಶೋಕ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ.

ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆ ಶಿಯಾ ಸಮುದಾಯದವರು ಇಲ್ಲಿನ ಖೆಟ್ಕೊ ಎನ್ನುವ ಗ್ರಾಮದಲ್ಲಿ ಶೋಕ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಕಬ್ಬಿಣದಿಂದ ಮಾಡಿದ ಧಾರ್ಮಿಕ ಧ್ವಜವು 11 ಸಾವಿರ ವೋಲ್ಟ್‌ನ ವಿದ್ಯುತ್ ತಂತಿಗೆ ತಗುಲಿದೆ. ಇದರಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ 10 ಮಂದಿಗೆ ಸುಟ್ಟಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ.