ದುಬೈ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ದುಬೈನಲ್ಲಿ ನಡೆದಿದ್ದು, ವಿಶ್ವದ ನಾಯಕರು ಭಾಗವಹಿಸಿದ್ದರು. ಈ ವೇಳೆ ಮೋದಿ ಮತ್ತು ಮೆಲೋನಿ ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಮೆಲೋನಿ ಅವರು ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮೋದಿ ಅವರು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿ ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತ ಮತ್ತು ಇಟಲಿ ನಡುವಿನ ಸಹಯೋಗದ ಪ್ರಯತ್ನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ 2028ರಲ್ಲಿ ಭಾರತದಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಆಯೋಜನೆಯ ಪ್ರಸ್ತಾಪವನ್ನು ಮೋದಿ ಮಾಡಿದ್ದಾರೆ.










