ಮೋದಿ ನೇತೃತ್ವದ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಸಚಿವ ಸ್ಥಾನ…

157
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಕರ್ನಾಟಕದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರಕಿದ್ದು, ಬೆಂ.ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಷಿ ಅವರು ಸಂಪುಟದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೂವರಿಗೂ ಕರೆ ಮಾಡಿ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಬರಬೇಕೆಂದು ತಿಳಿಸಿದ್ದು, ಬಳಿಕ ರಾಷ್ಟ್ರಪತಿಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.