ಮೋದಿ ರೋಡ್ ಶೋ– ಹೆಜ್ಜೆ ಹೆಜ್ಜೆಗೂ ಹೂಮಳೆ, ಮೊಳಗಿತು ಜಯಘೋಷ…

50
firstsuddi

ಬೆಂಗಳೂರು: ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತದಾರರ ಮನಗೆಲ್ಲಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.

ನಗರದ ಸೋಮೇಶ್ವರ ಸಭಾಭವನದಿಂದ ಮೋದಿಯವರು ರೋಡ್ ಶೋ ಆರಂಭಿಸಿದ್ದು, ಪ್ರಧಾನಮಂತ್ರಿಗಳೊಂದಿಗೆ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಅವರು ಸಾಥ್ ನೀಡಿದ್ದಾರೆ.

ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ಹೂಮಳೆ ಸುರಿಸಿ ಸಂಭ್ರಮಿಸಿದ್ದಾರೆ. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ.