ಮೋದಿ ವಿರುದ್ಧ ಅಹ್ಮದ್ ಪಟೇಲ್ ಸಂಚು ರೂಪಿಸಿದ್ದರು : ಎಸ್‍ಐಟಿ.

81
firstsuddi

ಅಹಮದಾಬಾದ್ : 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತನಿಖಾ ತಂಡ ಎಸ್ಐಟಿ ಗುಜರಾತ್ ಗಲಭೆ ಹಿಂದೆ ಅಹ್ಮದ್ ಪಟೇಲ್ ಕೈವಾಡವಿದೆ. ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.

ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ನೀಡದಂತೆ ಗುಜರಾತ್ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸುವ ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

2002ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸೆಟಲ್ವಾಡ್ ಪಿತೂರಿ ನಡೆಸಿದ್ದರು ಎಂದು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಿಕೊಂಡಿದೆ.

2002 ರಲ್ಲಿ ಗೋಧ್ರಾ ಗಲಭೆ ನಂತರ ಪಟೇಲ್ ಅವರ ಆದೇಶದ ಮೇರೆಗೆ ಸೆಟಲ್ವಾಡ್ 30 ಲಕ್ಷ ರೂ. ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಭೆ ಪ್ರಕರಣದಲ್ಲಿ ಬಿಜೆಪಿ ಸರಕಾರದ ಹಿರಿಯ ನಾಯಕರ ಹೆಸರನ್ನು ಸಿಲುಕಿಸಲು ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಸೆಟಲ್ವಾಡ್ ಭೇಟಿಯಾಗುತ್ತಿದ್ದರು ಎಂದು ಎಸ್ ಐಟಿ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ವಿಶೇಷ ತನಿಖಾ ತಂಡದ (ಎಸ್ಐಟಿ) ಪ್ರತಿಕ್ರಿಯೆಯನ್ನು ದಾಖಲಿಸಿಕೊಂಡು ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಗುಜರಾತ್ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯ ಸೃಷ್ಟಿಸಿದ ಆರೋಪದಲ್ಲಿ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್ ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದೆ.

ಎಸ್ ಐಟಿಯ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್, ಇದು ಕಪೋಲಕಲ್ಪಿತ, ದುರುದ್ದೇಶದ್ದು ಎಂದು ಹೇಳಿದೆ. 2002ರಲ್ಲಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಉಂಟಾಗಿದ್ದ ಕೋಮು ಹತ್ಯಾಕಾಂಡದ ಯಾವುದೇ ಹೊಣೆಗಾರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಮುಕ್ತಿ ಪಡೆಯುವ ವ್ಯವಸ್ಥಿತ ಕಾರ್ಯತಂತ್ರದ ಭಾಗವಾಗಿದೆ. ಈ ಹತ್ಯಾಕಾಂಡವನ್ನು ನಿಯಂತ್ರಿಸಲು ಅವರ ಇಚ್ಛಾಶಕ್ತಿ ಮತ್ತು ಅಸಮರ್ಥತೆಯೇ ಆಗಿನ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮುಖ್ಯಮಂತ್ರಿಗಳಿಗೆ ತಮ್ಮ ರಾಜಧರ್ಮ ವನ್ನು ನೆನಪಿಸಲು ಕಾರಣವಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇದು ಪ್ರಧಾನಿಯವರ ರಾಜಕೀಯ ಸೇಡಿನ ತಂತ್ರವಾಗಿದ್ದು, ಅವರ ರಾಜಕೀಯ ವಿರೋಧಿಗಳಾದವರು ಅಗಲಿದರೂ ಸಹ ಬಿಡುವುದಿಲ್ಲ. ಈ ಎಸ್ ಐಟಿ ತನ್ನ ರಾಜಕೀಯ ಮಾಸ್ಟರ್ ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಮತ್ತು ಎಲ್ಲಿ ಹೇಳಿದರೂ ಕುಳಿತುಕೊಳ್ಳುತ್ತದೆ. ಹಿಂದಿನ ಎಸ್ ಐಟಿ ಮುಖ್ಯಸ್ಥರು ಮುಖ್ಯಮಂತ್ರಿಗೆ ‘ಕ್ಲೀನ್ ಚಿಟ್’ ನೀಡಿದ ನಂತರ ರಾಜತಾಂತ್ರಿಕ ಹುದ್ದೆಯೊಂದಿಗೆ ಹೇಗೆ ಬಹುಮಾನ ಪಡೆದರು ಎಂಬುದು ನಮಗೆ ತಿಳಿದಿದೆ ಎಂದು ಹೇಳಿದ್ದಾರೆ.