ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು. ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದರು. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ನಾಳೆ ಮಂಗಳೂರಿನಲ್ಲಿ ಕುಂಬ್ಳೆ ಸುಂದರ್ ರಾವ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.










