ಯಲಹಂಕ ಬಳಿ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣ : ನಾರಾಯಣಗೌಡ.

66
firstsuddi

ಬೆಂಗಳೂರು : ರಾಜ್ಯದ ಪ್ರಥಮ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಯಲಹಂಕ ಬಳಿ 100 ಎಕರೆ ಜಾಗ ಗುರುತಿಸಲಾಗಿದೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು.

ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್-2021 ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಖೇಲೋ ಇಂಡಿಯಾ ಉದ್ಘಾಟನೆಯಾಗಿದ್ದು, ನಾಲ್ಕು ಕಡೆ ವಿವಿಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ 504 ಕೋಟಿ ರೂಪಾಯಿ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣವಾಗುತ್ತದೆ. ಕಂಠೀರವ ಸ್ಟುಡಿಯೋದಲ್ಲಿ ಹಾಳಾಗಿದ್ದ ಸಿಂಥೆಟಿಕ್ ಟ್ರ್ಯಾಕ್ ಅನ್ನು ಮರುನಿರ್ಮಿಸಲು 5 ಕೋಟಿ ವೆಚ್ಚ ಮಾಡಲಾಗುತ್ತಿದೆ. ತುಮಕೂರಿನಲ್ಲಿ 4.5 ಕೋಟಿ ವೆಚ್ಚದಲ್ಲಿ ದೊಡ್ಡ ಕ್ರೀಡಾ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ ಎಂದರು.

ಜಕ್ಕೂರು ಏರೋಡ್ರೋಮ್‍ನಲ್ಲಿ 100 ಮಕ್ಕಳಿಗೆ ಪೈಲಟ್ ತರಬೇತಿ ಕೊಡಲಾಗುವುದು. 6 ಏರ್​ಕ್ರಾಪ್ಟ್​ಗಳಲ್ಲಿ 3 ಪೈಲಟ್‍ಗಳು ತರಬೇತಿ ಕೊಡುತ್ತಿದ್ದಾರೆ. ಅಮೃತ ಕ್ರೀಡಾ ದತ್ತು ಯೋಜನೆಯಡಿ 75 ಮಕ್ಕಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಲು ಯೋಜನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಮಹಿಳಾ ಕ್ರೀಡಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 30 ಕಡೆ ಹಾಸ್ಟೆಲ್ ನಿರ್ಮಾಣ ಮಾಡಲಾಗಿದೆ. ಮೈಸೂರು ಭಾಗದಲ್ಲಿ ಗಡಿ ಮನೆ ಮಾಡಿದ್ದೇವೆ, ಹಳೆಯ ಕುಸ್ತಿಪಟುಗಳುಗೆ 1 ಸಾವಿರ ರೂ ಮಾಸಾಶನ ಹೆಚ್ಚಿಸಲಾಗಿದೆ. ಬೆಂಗಳೂರು, ಮಂಡ್ಯದಲ್ಲಿ ಮಕ್ಕಳ ಕ್ರೀಡಾ ಸಾಮರ್ಥ್ಯ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.