ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆಲುವು…

261
firstsuddi

ಕಾರವಾರ : ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಅವರು 30ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. 17ಸುತ್ತುಗಳ ಮತ ಎಣಿಕೆ ಮುಕ್ತಾಯವಾಗಿದ್ದು, ಶಿವರಾಂ ಹೆಬ್ಬಾರ್ ಅವರು 80,440 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‍ನ ಭೀಮಣ್ಣ ನಾಯ್ಕ್ ಅವರ ವಿರುದ್ಧ 31,406 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇನ್ನೂ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮನ್ನು ಅನರ್ಹಗೊಳಿಸಿದವರಿಗೆ ಮತದಾರರು ಪಾಠ ಕಲಿಸಿದ್ದಾರೆ. ಜನರು ನನಗೆ ಆಶೀರ್ವಾದ ಮಾಡಿದ್ದಾರೆ ಎಂದರು.