ಯಾದಗಿರಿ: ನಗರದ ಹೊರವಲಯದ ಚಿತ್ತಾಪುರ ರಸ್ತೆಯಲ್ಲಿ ಟ್ರಕ್ ಹರಿದು 25 ಕುರಿಗಳು ಸಾವಿಗೀಡಾಗಿರುವ ಘಟನೆ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಡೆದಿದೆ.
ಕುರಿಗಾಯಿಗಳು ಕುರಿ ಮೇಯಿಸಲು ರಸ್ತೆ ದಾಟಿ ಹೋಗುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಟ್ರಕ್ ಕುರಿಗಳ ಮೇಲೆ ಹರಿದಿದೆ. ಇದರಿಂದ ನಾಗಪ್ಪ, ಅಂಬಲಯ್ಯ, ಧರ್ಮರಾಜ ಹಾಗೂ ನಿಂಗಪ್ಪ ಎಂಬ ಕುರಿಗಾಯಿಗಳಿಗೆ ಸೇರಿದ ಕುರಿಗಳು ಮೃತಪಟ್ಟಿವೆ.
ಕುರಿಗಾಯಿಗಳು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಾಗನಟಗಿ ಗ್ರಾಮದದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










