ಯಾರನ್ನು ಯಾವಾಗ ಏನ್ ಬೇಕಾದ್ರು ಕಾಂಗ್ರೆಸ್ ಸರ್ಕಾರದಲ್ಲಿ ಮಾಡ್ತಾರೆ: ಕೇಂದ್ರ ಸಚಿವ ಕುಮಾರಸ್ವಾಮಿ.

29

ಬೆಂಗಳೂರು: ಐಶ್ವರ್ಯ ಗೌಡ ಕೇಸ್‍ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಈಗ ರಾಜ್ಯದಲ್ಲಿ ಬೆಳ್ಳಿ, ಚಿನ್ನ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ಗುರುವಾರ, ಬುಧವಾರದಿಂದ ವರದಿ ಕೇಳಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಯಾಗಿದ್ರು. ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ವಿಚಾರಣೆ ನಡೆಯುತ್ತಿದೆ ಅನ್ನೋದು ತಿಳಿದಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ವದರಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದು ಹೇಳಿದರು. 2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ವದರಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತದೆ. ಸರ್ಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಮುಖ್ಯಮಂತ್ರಿ ಇದಿದ್ದು. ಆಗ ಯಾಕೆ ನನ್ನ ಹತ್ತಿರ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸುತ್ತಾ ವಾಗ್ದಾಳಿ ನಡೆಸಿದರು.