ಯಾರೋ ಹೇಳಿದ ಮಾತ್ರಕ್ಕೆ ಎಲ್ಲರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ : ಬಿ.ಎಸ್. ಯಡಿಯೂರಪ್ಪ.

363
firstsuddi

ರಾಯಚೂರು : ಯಾರೋ ಕೇಳಿದ ಮಾತ್ರಕ್ಕೆ ಎಲ್ಲರಿಗೂ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಅವರ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಲ್ಲಾ 17ಮಂದಿಗೂ ಸಚಿವ ಸ್ಥಾನ ನೀಡಬೇಕು ಎಂಬ ಹೇಳಿಕೆಗೆ ಪ್ರತಿಕ್ರಯಿಸಿದ್ದು, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಯಾರಿಗೆ ಯಾವ ಖಾತೆಯನ್ನು ನೀಡಬೇಕು ಎಂದು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಯಾರೋ ಹೇಳಿದ ಮಾತ್ರಕ್ಕೆ ಎಲ್ಲರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.