ಯುಪಿ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಉನ್ನಾವೋ ರೇಪ್ ಸಂತ್ರಸ್ತೆ ತಾಯಿಗೂ ಟಿಕೆಟ್…

79
firstsuddi

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ. 125 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದು, ಅವರ ಪೈಕಿ 50 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪ್ರಮುಖವಾಗಿ, ಕಾಂಗ್ರೆಸ್ ಪಕ್ಷ 2017ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ದೇವಿಗೆ ಟಿಕೆಟ್ ನೀಡಿದ್ದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಶೇ.40 ಮಹಿಳೆಯರು ಮತ್ತು ಶೇ.40ರಷ್ಟು ಯುವಕರಿದ್ದಾರೆ.

ಈ ಸಂಬಂಧ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಎಲ್ಲ ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು, ಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯಕ್ಕೆ ನಾಂದಿ ಹಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.