ಮುಂಬೈ : ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ರ ಅಡಿಯಲ್ಲಿ ಚೌಹಾನ್ ನ್ನು ಬಂಧಿಸಲಾಗಿದೆ. ಸಂತ್ರಸ್ತ ಯುವತಿ ಪ್ರಚೀನ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಅದರ ಆಧಾರದ ಮೇಲೆ ಚೌಹಾನ್ ನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ 22 ವರ್ಷದ ಯುವತಿ ನನ್ನ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಪೊಲೀಸರ ಎದುರು ಹೇಳಿಕೆ ನೀಡಿದ್ದರು. ಇದೇ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.
ಪ್ರಚೀನ್ ಚೌಹಾಣ್ ಅವರು ಏಕ್ತಾ ಕಪೂರ್ ನಿರ್ಮಾಣದ ಧಾರಾವಾಹಿ ‘ಕಸೌತಿ ಜಿಂದಗಿ ಕ್ಯಾ’ ಸೀರಿಯಲ್ ನಿಂದ ಖ್ಯಾತಿ ಗಳಿಸಿದ್ದಾರೆ.










