ಕೋಲಾರ : ಸಾರಿಗೆ ಬಸ್ ನಲ್ಲಿ ಯುವತಿಯರನ್ನು ಚುಡಾಯಿಸಿದ್ದಕ್ಕೆ ಯುವಕನಿಗೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಾಬು ಎಂಬಾತನಿಗೆ ಅಭಿ, ನಾಗೇಂದ್ರ, ಗಂಗಾಧರ್, ನರೇಷ್ ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿದೆ. ಸದ್ಯ ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ ಬಾಬು ಹಾಗೂ ಮತ್ತೊಬ್ಬ ಯುವಕ ತಾಡಿಗೋಳ್ ಗ್ರಾಮದ ಯುವತಿಯರನ್ನು ಚುಡಾಯಿಸುತ್ತಿದ್ದರು. ಚುಡಾಯಿಸಬೇಡ ಎಂದು ಎಚ್ಚರಿಕೆ ನೀಡಿದ್ದರು, ಮತ್ತೊಮ್ಮೆ ಚುಡಾಯಿಸಿದ್ದಕ್ಕೆ ಯುವಕರು ಧರ್ಮದೇಟು ನೀಡಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










