ಯುವತಿ ಅನುಮಾನಾಸ್ಪದ ಸಾವು : ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ…

40
firstsuddi

ಬೆಳಗಾವಿ : ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 19 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿರುವ ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ತಬಸ್ಸುಮ್ ಕಾಲ್ ಸೆಂಟರ್ ಗೆ ಕೆಲಸಕ್ಕೆ ಸೇರಿದ್ದರು. ಆದರೆ ಏಕಾಏಕಿ ನಿನ್ನೆ ತಬಸ್ಸುಮ್ ಳನ್ನು ಅಪರಿಚಿತ ವ್ಯಕ್ತಿಯೊಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ಆಸ್ಪತ್ರೆಗೆ ದಾಖಲಿಸಿದ ಯುವಕ ಬಳಿಕ ಯುವತಿಯ ಮೊಬೈಲ್‌ನೊಂದಿಗೆ ಎಸ್ಕೇಪ್ ಆಗಿದ್ದಾನೆ. ನಂತರ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ ವೇಳೆ ಯುವತಿ ನಿತ್ರಾಣಳಾಗಿದ್ದಳು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ತಬಸ್ಸುಮ್ ಸಾವನ್ನಪ್ಪಿದ್ದಾಳೆ.

ಇನ್ನೂ ತಬಸ್ಸುಮ್ ತಲೆಯ ಹಿಂಬದಿಗೆ ಗಾಯದ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಮೈಯಲ್ಲಿ ಸಿಗರೇಟ್ ನಿಂದ ಸುಟ್ಟಿರುವ ಗಾಯದ ಗುರುತುಗಳಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆ ಮಾಡಬೇಕು. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.