ಚಿಕ್ಕಮಗಳೂರು : ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಾಗಿದೆ.
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ಮೊಹಮ್ಮದ್ ನಲಪಾಡ್ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಕಡೂರಿನ ಜೆ.ಎಮ್.ಎಫ್.ಸಿ ಕೋರ್ಟಿಗೂ ಪ್ರದೀಪ್ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ರಾಹುಲ್ ಗಾಂಧಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.










