ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರಿ ಹಿನ್ನಡೆ ಉಂಟಾಗಿದೆ.
2019ರಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಸುದೀರ್ಘ ವಿಚಾರಣೆಗೆ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಈ ಮೊದಲು ಸೂಚಿಸಿತ್ತು. ಹೈಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್ ನ ಈ ತೀರ್ಪು ಪ್ರಶ್ನಿಸಿ ಪುನಃ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ, ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿಯೂ ಹಿನ್ನಡೆಯಾಗಿದೆ.










