ನವದೆಹಲಿ : ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿಕೆ ನೀಡಿದ್ದ ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಹೇಳಿಗೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೀಗಾ ಪ್ರಗ್ಯಾ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿಯಿಂದ ಕೈಬಿಡಲಾಗಿದೆ. ಪ್ರಗ್ಯಾ ಸಿಂಗ್ ಅವರು ನಿನ್ನೆ ಲೋಕಸಭಾ ಅಧಿವೇಶನದಲ್ಲಿ ನಾಥೂರಾಮ್ ಗೋಡ್ಸೆ ದೇಶ ಭಕ್ತ ಎಂಬ ವಿವಾಧಾತ್ಮಕ ಹೇಳಿಕೆಯನ್ನು ನೀಡಿದ್ದರು. ಸಾಧ್ವಿ ಅವರ ಹೇಳಿಕೆಗೆ ವಿರೋಧ ಪಕ್ಷದ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿ ಲೋಕಸಭೆಯಲ್ಲೇ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಪ್ರಗ್ಯಾ ಸಿಂಗ್ ಅವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಕಾರ್ಯಗಾರಿ ಅಧ್ಯಕ್ಷ ಜೆ.ಪಿ. ನಡ್ಡ ಅವರು ಲೋಕಸಭೆಯಲ್ಲಿ ಪ್ರಗ್ಯಾ ಸಿಂಗ್ ಅವರು ಹೇಳಿಕೆ ನೀಡಿರುವುದು ಖಂಡನೀಯ ಇಂತಹ ಹೇಳಿಕೆಗೆ ಹಾಗೂ ಸಿದ್ದಾಂತಗಳಿಗೆ ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ. ಹೀಗಾಗಿ ಪ್ರಗ್ಯಾ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಿತಿಯಿಂದ ಉಚ್ಛಾಟಿಸಲಾಗಿದ್ದು, ಅಲ್ಲದೇ ಅವರು ಈಗಾ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಭಾಗವಹಿಸುವಂತಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೇರಿದಂತೆ ವಿಪಕ್ಷ ನಾಯಕರುಗಳು ಸಾಧ್ವಿ ಪ್ರಜ್ಞಾ ಸಿಂಗ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಮೂಲಕ ಭಯೋತ್ಪಾದಕಿ ಪ್ರಗ್ಯಾ ಅವರು ಭಯೋತ್ಪಾದಕ ಗೋಡ್ಸೆಯನ್ನು ದೇಶ ಭಕ್ತ ಎಂದು ಕರೆದಿರುವುದು ಭಾರತದ ಲೋಕಸಭೆಯ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ಟ್ವೀಟ್ ಮಾಡಿದ್ದಾರೆ










