ಹಾವೇರಿ : ತಂದೆಯ ಸಾವಿಗೆ ರಜೆ ಮೇಲೆ ಊರಿಗೆ ಬಂದಿದ್ದ ಭಾರತೀಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ತಾವರಗಿ ಗ್ರಾಮದಲ್ಲಿ ನಡೆದಿದೆ. ಭರಮಗೌಡ ಹೊಸಮನಿ(39) ಮೃತ ಯೋಧ ಎಂದು ಗುರುತಿಸಲಾಗಿದೆ. ಭರಮಗೌಡ ಹೊಸಮನಿ ಅವರು 18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಸದ್ಯ ಮೇಘಾಲಯದ ಬಿ.ಎಸ್.ಎಫ್ ಬೆಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 15 ದಿನಗಳ ಹಿಂದೆ ತಮ್ಮ ನಿಧನರಾಗಿದ್ದಾರೆ ಎಂದು ರಜೆ ಮೇಲೆ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು. ನಿನ್ನೆ ಸಂಜೆ ಭರಮಗೌಡ ಹೊಸಮನಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಕುಟುಂಬಸ್ಥರು ಕೂಡಲೇ ಅವರನ್ನು ಹಿರೇಕೆರೂರು ತಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಯೋಧ ಭರಮಗೌಡ ಹೊಸಮನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.










