ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಎಸ್‍ಐಟಿ…

152
Firstsuddi

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಆರಂಭಗೊಂಡಿದ್ದು ಓರ್ವ ವ್ಯಕ್ತಿಯನ್ನು ಎಸ್‍ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯು ಸಿಡಿಗೆ ಸಂಬಂಧಿಸಿದ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ವ್ಯಕ್ತಿಗೆ ಯುವತಿ ಜೊತೆ ಉತ್ತಮ ಸಂಬಂಧವಿದ್ದು ಈತನೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈತನನ್ನು ವಿಚಾರಣೆಗೆ ಕರೆತಂದಿರುವ ಎಸ್‍ಐಟಿ ಪೊಲೀಸರು ನಿಜಾಂಶ ತಿಳಿಯಲು ಪ್ರಯತ್ನಿಸುತ್ತಿದ್ದಾರೆ.