ಪುಟಿನ್‍ರಿಂದ ಬ್ಲ್ಯಾಕ್ ಬೆಲ್ಟ್ ಹಿಂಪಡೆಯಲು ವಿಶ್ವ ಟೇಕ್ವಾಂಡೋ ನಿರ್ಧಾರ.

103
firstsuddi

ಸಿಯೋಲ್ : ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಿದೆ. ಈ ಮಧ್ಯೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ರಿಗೆ ನೀಡಲಾದ ಟೇಕ್ವಾಂಡೋ ಬ್ಲ್ಯಾಕ್ ಬೆಲ್ಟ್ ಅನ್ನು ವಿಶ್ವ ಟೇಕ್ವಾಂಡೋ ಸಂಸ್ಥೆ ಹಿಂಪಡೆಯಲು ನಿರ್ಧರಿಸಿದೆ.

ಉಕ್ರೇನ್ ನಲ್ಲಿ ಮುಗ್ಧ ಜೀವಗಳ ಮೇಲಿನ ಕ್ರೂರ ದಾಳಿಯನ್ನು ವಿಶ್ವ ಟೇಕ್ವಾಂಡೋ ಬಲವಾಗಿ ಖಂಡಿಸುತ್ತದೆ. ಗೌರವ ಮತ್ತು ಸಹಿಷ್ಣುತೆ ಹೊಂದಿರುವ ವಿಶ್ವ ಟೇಕ್ವಾಂಡೋ ಮೌಲ್ಯಗಳಿಗೆ ಇದು ವಿರುದ್ಧವಾಗಿದೆ. ಹೀಗಾಗಿ ನವೆಂಬರ್ 2013ರಲ್ಲಿ ವಾಡ್ಲಿಮಿರ್ ಪುಟಿನ್ ಅವರಿಗೆ ನೀಡಲಾಗಿದ್ದ 9ನೇ ಬ್ಲ್ಯಾಕ್ ಬೆಲ್ಟ್ ಹಿಂಪಡೆಯಲು ನಿರ್ಧರಿಸಿದೆ ಎಂದು ವಿಶ್ವ ಟೇಕ್ವಾಂಡೋ ಸಂಸ್ಥೆ ಪ್ರಕಟಿಸಿದೆ.

ಇಷ್ಟೇ ಅಲ್ಲದೆ ಅಂತರರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯೊಂದಿಗೆ ಒಗ್ಗಟ್ಟಿನಿಂದ, ಯಾವುದೇ ರಷ್ಯನ್ ಅಥವಾ ಬೆಲರೂಸಿಯನ್ ರಾಷ್ಟ್ರೀಯ ಧ್ವಜಗಳು ಅಥವಾ ಗೀತೆಗಳನ್ನು ವಿಶ್ವ ಟೇಕ್ವಾಂಡೋ ಸ್ಪರ್ಧೆಗಳಲ್ಲಿ ಪ್ರದರ್ಶಿಸಲಾಗುವುದಿಲ್ಲ ಅಥವಾ ನುಡಿಸಲಾಗುವುದಿಲ್ಲ. ಇದರ ಜೊತೆಗೆ
ವಿಶ್ವ ಟೇಕ್ವಾಂಡೋ ಮತ್ತು ಯುರೋಪಿಯನ್ ಟೇಕ್ವಾಂಡೋ ಸಂಸ್ಥೆಗಳೆರಡು ರಷ್ಯಾ ಮತ್ತು ಬೆಲಾರಸ್ ನಲ್ಲಿ ಟೇಕ್ವಾಂಡೋ ಕಾರ್ಯಕ್ರಮಗಳನ್ನು ಆಯೋಜಿಸುವುದಿಲ್ಲ ಎಂದು ಹೇಳಲಾಗಿದೆ.