ರಷ್ಯಾ ಕ್ಷಿಪಣಿ ದಾಳಿ – 600 ಉಕ್ರೇನ್ ಸೈನಿಕರ ಹತ್ಯೆ…

61
firstsuddi

ಕೀವ್ : ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, 600ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಷ್ಯಾ ಹೇಳಿಕೊಂಡಿದೆ.

ಕ್ರಾಮಾಟೋರ್ಸ್ಕ್ ನಲ್ಲಿರುವ ಉಕ್ರೇನಿಯನ್ ಸೇನಾ ನೆಲೆಯ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 600ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಹೇಳಿಕೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಉಕ್ರೇನ್ ಸೈನ್ಯ ರಷ್ಯಾದ ಸೈನಿಕರ ಬ್ಯಾರಕ್ ಮೇಲೆ ದಾಳಿ ನಡೆಸಿ 89 ಸೈನಿಕರ ಸಾವಿಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಯಾಗಿ ರಷ್ಯಾ ಸೈನ್ಯ ಉಕ್ರೇನ್ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಕ್ರೇನ್ ಸೈನ್ಯದ ಅಧಿಕಾರಿಗಳು ರಷ್ಯಾ ದಾಳಿ ನಡೆಸಿರುವುದು ನಿಜ ಆದರೆ ನಮ್ಮ ಕಟ್ಟಡ ಸಹಿತ ಕೆಲ ಪ್ರದೇಶಗಳಿಗೆ ಹಾನಿಯಾಗಿದೆ. ಆದರೆ ನಮ್ಮ ಸೈನಿಕರು ಈ ದಾಳಿಯಲ್ಲಿ ಸಾವನ್ನಪ್ಪಿಲ್ಲ ಎಂದು ತಿಳಿಸಿದೆ.