ಉಕ್ರೇನ್​​ನಲ್ಲಿ ರಷ್ಯಾ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು…

80
firstsuddi

ಖಾರ್ಕಿವ್(ಉಕ್ರೇನ್) : ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ವೈಮಾನಿಕ ಶೆಲ್ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ವಿದ್ಯಾಭ್ಯಾಸಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್ ನ ಖಾರ್ಕಿವ್ ನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ ತಿಂಡಿ ತರಲು ಹೊರ ಹೋಗಿದ್ದಾಗ ರಷ್ಯಾ ಸೇನೆಯ ದಾಳಿಯಲ್ಲಿ ಬಲಿಯಾಗಿದ್ದಾರೆ.

ಈ ವಿಚಾರವನ್ನು ಭಾರತೀಯ ವಿದೇಶಾಂಗ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. ಸದ್ಯ ನವೀನ್ ಮೃತದೇಹವನ್ನು ಖಾರ್ಕಿವ್ ನ ಶವಾಗಾರದಲ್ಲಿ ಇಡಲಾಗಿದೆ.