ಕೀವ್ : ಉಕ್ರೇನ್‍ನಲ್ಲಿ ರಷ್ಯಾ ದಾಳಿ ವೇಳೆ ಕರ್ನಾಟಕದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.
ಹಾವೇರಿಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಉಕ್ರೇನ್ನ ಖಾರ್ಕೀವ್ ನಲ್ಲಿ ರಷ್ಯಾ ದಾಳಿ ವೇಳೆ ಸಾವನ್ನಪ್ಪಿದ್ದು, ನವೀನ್ ಮೃತದೇಹದ ಫೋಟೋವನ್ನು ಉಕ್ರೇನ್ ನಲ್ಲಿ ಸಿಲುಕಿರುವ ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಸದ್ಯ ಖಾರ್ಕಿವ್ ನಲ್ಲಿ ನವೀನ್ ಮೃತದೇಹ ಇದ್ದು, ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಪಾರ್ಥಿವ ಶರೀರ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ.










