ರಷ್ಯಾ ಯುದ್ಧದ ಎಫೆಕ್ಟ್ – ಭಾರೀ ಏರಿಕೆ ಕಂಡ ತೈಲ ಬೆಲೆ…

75
firstsuddi

ಲಂಡನ್ : ಉಕ್ರೇನ್ ಮೇಲಿನ ರಷ್ಯಾ ದಾಳಿಯಿಂದಾಗಿ ಜಾಗತೀಕ ಮಟ್ಟದಲ್ಲಿ ಸಾಕಷ್ಟು ಪರಿಣಾಮ ಬೀರುತ್ತಿದೆ. ಜೊತೆಗೆ ವಿಶ್ವ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಮೇಲೆ ಅಗಾಧ ಪರಿಣಾಮ ಬೀರಿದ್ದು, ಇಂದಿನ ವಹಿವಾಟಿನಲ್ಲಿ ಬ್ರೆಂಟ್ ಕಚ್ಚಾ ತೈಲವು ಬ್ಯಾರಲ್ ಗೆ 130 ಡಾಲರ್ ಗೆ ತಲುಪಿದೆ.

ರಷ್ಯಾ ಪಡೆಗಳು ಉಕ್ರೇನ್ ನ ಪ್ರಮುಖ ಪ್ರದೇಶ ಹಾಗೂ ಕಟ್ಟಡಗಳನ್ನು ಹಾನಿಗೊಳಿಸಿರುವುದರಿಂದ ಆ ದೇಶ ಹೆಚ್ಚಿನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆಯ ನಂತರ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಉಂಟಾಗಿದೆ.

ತೈಲದ ಜಾಗತಿಕ ಬೆಲೆ ಏರಿಕೆಯು ಭಾರತದ ಮೇಲೂ ಪರಿಣಾಮ ಬೀರಲಿದೆ. ಭಾರತ ತನ್ನ ಅಗತ್ಯಗಳಲ್ಲಿ ಶೇ.85 ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಇದು ಭಾರತದ ಹಣದುಬ್ಬರದ ಒತ್ತಡಕ್ಕೆ ಕಾರಣವಾಗಬಹುದು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಬಹುದು.