ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ-ಸ್ಥಳದಲ್ಲೇ ಇಬ್ಬರ ಸಾವು…

240
firstsuddi

ರಾಯಚೂರು : ರಸ್ತೆಗೆ ಅಡ್ಡವಾಗಿ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಣ್ಣಿಕೇರಿ ಬಳಿ ನಡೆದಿದೆ. ಶಿರಸಿ ಮೂಲದ ಮೆಹನಾಜ್(28) ಹಾಗೂ ಇಸ್ಮಾಯಿಲ್(70) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಕಾರಿನಲ್ಲಿ ಮೃತರು ಸೇರಿದಂತೆ ಒಟ್ಟು 10 ಮಂದಿ ಶಿರಸಿಯಿಂದ ರಾಯಚೂರಿಗೆ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮಣ್ಣಿಕೇರಿ ಬಳಿ ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಬಳಗಾನೂರು ಗ್ರಾಮದಲ್ಲಿ ಪ್ರಕರಣ ದಾಖಲಾಗಿದೆ.