ರಸ್ತೆ ಅಪಘಾತದಲ್ಲಿ ಮಹಿಳೆ ಸಾವು.. ಸಮಗ್ರ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಸಿಎಂ ಸೂಚನೆ…

56
firstsuddi

ಬೆಂಗಳೂರು : ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟ ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ರಸ್ತೆ ಗುಂಡಿಯಿಂದಾಗಿ ಈ ಘಟನೆ ನಡೆದಿದೆ ಎಂಬ ಆರೋಪವಿದೆ. ಈ ಹಿನ್ನೆಲೆ ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಬೀದರ್ ನಿಂದ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ರಸ್ತೆ ಗುಂಡಿಗೆ ಮಹಿಳೆ ಬಲಿ ಪ್ರಕರಣ ವಿಷಾದನೀಯ. ಈಗಾಗಲೇ ಅಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಮಾಹಿತಿ ಕೇಳಿದ್ದೇನೆ. ಎಲ್ಲವನ್ನೂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

ಇದೇ ಸಂದರ್ಭದಲ್ಲಿ ಒಕ್ಕಲಿಗರು 12% ಮೀಸಲಾತಿ ಬೇಡಿಕೆ ವಿಚಾರವಾಗಿ ಮಾತನಾಡಿ, ಇದಕ್ಕೆ ಈಗಾಗಲೇ ಅಧಿವೇಶನದಲ್ಲಿ ಉತ್ತರ ಕೊಟ್ಟಿದ್ದೇನೆ. ಎಲ್ಲಾ ಸಮುದಾಯಗಳಿಗೆ ಆಕಾಂಕ್ಷೆ ಇದೆ. ಅವರು ಕೇಳೋದ್ರಲ್ಲಿ ತಪ್ಪಿಲ್ಲ. ಅದನ್ನು ಏನೇ ಮಾಡಿದ್ರು ಕಾನೂನು ಚೌಕಟ್ಟು ಇದೆ, ಬೇರೆ ಬೇರೆ ಜಡ್ಜಜ್ಮೆಂಟ್ ಗಳಿವೆ. ಹಿಂದುಳಿದ ವರ್ಗಗಳ ಆಯೋಗ ಇದೆ. ಅವೆಲ್ಲ ವರದಿ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಎಂದರು.