ಜೈಪುರ(ರಾಜಸ್ಥಾನ): ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಕ್ಸು ಹೆದ್ದಾರಿಯಲ್ಲಿ ನಡೆದಿದೆ.
ಬರಾನ್ ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್ನಲ್ಲಿ ತೆರಳುತ್ತಿದ್ದ ವೇಳೆ, ಚಕ್ಸುವಿನ ರಾಷ್ಟ್ರೀಯ ಹೆದ್ದಾರಿ 12ರ ನಿಮೋಡಿಯಾ ಬಳಿ ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಕ್ಸು ಪೊಲೀಸರು, ತನಿಖೆ ಆರಂಭಿಸಿದ್ದಾರೆ.










