‘ನನ್ನಮ್ಮ ಸೂಪರ್ ಸ್ಟಾರ್’ ಸ್ಪರ್ಧಿ ಸಮನ್ವಿ ದಾರುಣ ಸಾವು…

78
firstsuddi

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಆರು ವರ್ಷದ ಸಮನ್ವಿ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ.

ಅಮೃತಾ ನಾಯ್ಡು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ನಿನ್ನೆ ಸಂಜೆ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ಸಮನ್ವಿ ಮೇಲೆ ಟಿಪ್ಪರ್ ಹರಿದು ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಸದ್ಯ ಅಮೃತನಾಯ್ಡುಗೆ ಸಣ್ಣಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.