ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು…

120
firstsuddi

ಚಿತ್ರದುರ್ಗ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ.ನುಲೇನೂರು ಗೇಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಪ್ಪ (51) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.