ರಸ್ತೆ ಬದಿಯ ತಡೆ ಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿ-ಇಬ್ಬರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ…

123
firstsuddi

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆನೆಸಿದರೆ ಗ್ರಾಮದ ಬಳಿ ನಡೆದಿದೆ. ಮಾರುತಿ ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. 7 ಮಂದಿಯ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಮಕ್ಕಳು ಸೇರಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.