ಬೀದರ್ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಸಸ್ತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಿಪ್ಪಣ್ಣಾ ಒಡಿಗೆ(28) ಹಾಗೂ ರವಿ ಶಿವಪ್ಪ(42) ಎಂದು ಗುರುತಿಸಲಾಗಿದೆ. ಮೃತರು ಬೈಕ್‍ನಲ್ಲಿ ಮೂವರು ನಿನ್ನೆ ರಾತ್ರಿ ಸಸ್ತಾಪುರ ಬಂಗ್ಲಾ ಕಡೆಯಿಂದ ಗುಂಡೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಸ್ತಾಪು ಸಮೀಪ ರಸ್ತೆ ತಿರುವಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ತುಳಸಿರಾಮ ತಿಪ್ಪಣ್ಣ(20) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‍ನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










