ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ – ಸಿಎಂ ಬೊಮ್ಮಾಯಿ ಹೇಳಿದ್ದೇನು?

62
firstsuddi

ಬೆಂಗಳೂರು : ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಜೊತೆಗೆ ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ. ಪ್ರವಾಹ ಬಂದಾಗ ಐಟಿಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.

ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಹೇಳಿದ್ದಾರೆ.