ಚಿತ್ರರಂಗದಲ್ಲಿ ಮಿಂಚುತ್ತಿರುವ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ರಾಜಕೀಯ ರಂಗಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಕಾಂಗ್ರೆಸ್ ಕಡೆಯಿಂದ ಕಿಚ್ಚನಿಗೆ ಬಂಪರ್ ಆಫರ್ ಸಿಕ್ಕಿದೆ.
ನಟಿ ರಮ್ಯಾ ಮೂಲಕ ಸುದೀಪ್ ಅವರನ್ನ ಕಾಂಗ್ರೆಸ್ ನಾಯಕರು ಈಗಾಗಲೇ ಸಂಪರ್ಕಿಸಿದ್ದಾರೆ. ಆದರೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಸುದೀಪ್ ಕಡೆಯಿಂದ ಬಂದಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಸುದೀಪ್ ಕೂಡ ಮೌನ ವಹಿಸಿದ್ದಾರೆ.










