ರಾಜೀನಾಮೆ ಅರ್ಜಿ ವಿಚಾರಣೆಗೆ ಸ್ಪೀಕರ್ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದ ಅತೃಪ್ತ ಶಾಸಕರು…

208
firstsuddi

ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ಸಲ್ಲಿಕೆ ಹಾಗೂ ಶಾಸಕರ ಅನರ್ಹತೆ ಕುರಿತು ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ನೀಡಿರುವ ಅರ್ಜಿಗೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರಿಗೆ ಇಂದು ಬೆಳಿಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದಕ್ಕೆ ಪ್ರತಿಕ್ರಯಿಸಿದ ಅತೃಪ್ತ ಶಾಸಕರು ತಕ್ಷಣಕ್ಕೆ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಮಗೆ ಒಂದು ತಿಂಗಳ ಕಾಲ ಕಾಲಾವಕಾಶ ನೀಡಬೇಕು ಎಂದು ಅತೃಪ್ತ ಶಾಸಕರು ಮನವಿ ಮಾಡಿದ್ದಾರೆ.