ಮುಂಬೈ : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸದ ಕಾರಣ ನಿನ್ನೆ ಸ್ಪೀಕರ್ ಅವರ ವಿರುದ್ಧ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಂದು ಕೋರ್ಟ್‍ನಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರು ವಾದ ಮಂಡಿಸುತ್ತಿದ್ದಂತೆ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದ್ದು, ಅತೃಪ್ತ ಶಾಸಕರೆಲ್ಲರೂ ಇಂದು ಸಂಜೆ 6ಗಂಟೆಯೊಳಗೆ ಖುದ್ದಾಗಿ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದರೆ ಮತ್ತೊಮ್ಮೆ ರಾಜೀನಾಮೆ ನೀಡುವಂತೆ ಆದೇಶ ಹೊರಡಿಸಿದ್ದು, ಹಾಗೂ ಅತೃಪ್ತ ಶಾಸಕರು ಸ್ಪೀಕರ್ ಎದುರು ಹಾಜರಾಗುವ ವೇಳೆ ಶಾಸಕರಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.










