ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಬಿಎಸ್ ವೈ.

136
firstsuddi

ನವದೆಹಲಿ : ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿದ್ದು, ಆ ರೀತಿಯ ಮಾತುಕತೆಗಳು ನಡೆದಿಲ್ಲ. ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಎಲ್ಲ ಗಾಳಿಸುದ್ದಿಗಳಿಗೆ ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ.

ಮುಂದಿನ ತಿಂಗಳ ಮೊದಲ ವಾರ ರಾಜ್ಯದ ಅಭಿವೃದ್ಧಿ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗುತ್ತಿದೆ.