ರಾಜೀನಾಮೆ ವಾಪಸ್ ಪಡೆಯಬೇಕಾದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು : ಎಂಟಿಬಿ ನಾಗರಾಜ್…

200
firstsuddi

ಬೆಂಗಳೂರು : ಸಚಿವ ಡಿ.ಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ಇಂದು ಬೆಳಿಗ್ಗೆಯಿಂದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದು, ಸತತ 6ಗಂಟೆಯಿಂದ ಮನವೊಲಿಸಲು ಪ್ರಯತ್ನ ಮಾಡಿದರೂ ಎಂಟಿಬಿ ನಾಗರಾಜ್ ಅವರು ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ. ಒಂದು ವೇಳೆ ರಾಜೀನಾಮೆ ವಾಪಸ್ ಪಡೆಯಬೇಕಾದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ನಾನು ಮುಂಬೈನಲ್ಲಿರುವ ಅತೃಪ್ತ ಶಾಸಕರ ಬಳಿ ಮಾತುಕತೆ ನಡೆಸುತ್ತೇನೆ ಎಂದು ಬೇಡಿಕೆ ಇಟ್ಟಿದ್ದಾರೆ.