ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ : ಮೋದಿ ಘೋಷಣೆ…

137
firstsuddi

ನವದೆಹಲಿ : ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ.

ದೇಶದಾದ್ಯಂತ ಅನೇಕ ನಾಗರಿಕರು ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಮನವಿ ಸಲ್ಲಿಸಿದ್ದರು. ಅವರ ಭಾವನೆಗಳನ್ನು ಗೌರವಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.