ಮೈಸೂರು : ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು ಫಿಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡುವಂತೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ.
ಮೈಸೂರು-ಕೊಡಗು ವ್ಯಾಪ್ತಿಯ ‘ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ’ ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಆನ್ಲೈನ್ ಸಂಗ್ರಹ ಅಭಿಯಾನವೂ ಆರಂಭವಾಗಿದ್ದು, ಕೊಡಗಿನ ಜನಸಂಖ್ಯೆ ಬಹಳ ಕಡಮೆ ಇದ್ದರು, ಅದರಲ್ಲಿ ಬಹುತೇಕರು ಭಾರತೀಯ ಸೇನೆಯ ಸೇವೆಯಲ್ಲಿದ್ದಾರೆ. ಅವರಿಗೆ ಗೌರವ ಸಮರ್ಪಿಸಲು ಕಾರಿಯಪ್ಪ ಅವರ ಹೆಸರು ಬಹಳ ಸೂಕ್ತ. ಕೊಡಗಿನ ಜನರು ಭಾರತೀಯ ಸೇನೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗೌರವಿಸಿ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪನವರ ಹೆಸರು ಇಡಬೇಕೆಂದು ಮನವಿಯಲ್ಲಿ ವಿವರಿಸಿದ್ದಾರೆ.










