ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೆರಾರಿವಾಲನ್ ಜೈಲಿನಿಂದ ಬಿಡುಗಡೆ…

57
firstsuddi

ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಆರೋಪಿ ಪೆರಾರಿವಾಲನ್ ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಪೆರಾರಿವಾಲ್ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಪೆರಾರಿವಾಲನ್ ಒಬ್ಬರಾಗಿದ್ದರು. ಕಳೆದ 31 ವರ್ಷಗಳಿಂದ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದರು.

ಕ್ಷಮಾಪಣೆ ಅರ್ಜಿ ಬಗ್ಗೆ ರಾಷ್ಟ್ರಪತಿಗಳು ನಿರ್ಧರಿಸುವವರೆಗೆ ನ್ಯಾಯಾಲಯ ಕಾಯಬೇಕು ಎಂಬ ಕೇಂದ್ರ ಮನವಿ ಮಾಡಿತ್ತು. ಆದರೆ ರಾಷ್ಟ್ರಪತಿಗಳು ನಿರ್ಧಾರ ಕೈಗೊಳ್ಳುವ ಮೊದಲೇ ಕೋರ್ಟ್ ಬಿಡುಗಡೆ ಮಾಡಲು ಸೂಚಿಸಿದೆ.

1998ರಲ್ಲಿ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಪೆರಾರಿವಾಲನ್ ಗೆ ಮರಣದಂಡನೆ ವಿಧಿಸಿತ್ತು. ಮರು ವರ್ಷ ಸುಪ್ರೀಂಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ 2014ರಲ್ಲಿ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಮಾರ್ಚ್ 9 ರಂದು ಸರ್ವೋಚ್ಛ ನ್ಯಾಯಾಲಯವು ಪೆರಾರಿವಾಲನ್ ಗೆ ಜಾಮೀನು ಮಂಜೂರು ಮಾಡಿತ್ತು. ನಂತರ ಪೆರಾರಿವಾಲನ್ ಜೈಲಿನಿಂದ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದ.

1991ರ ಮೇ 21ರಂದು ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಹಿಳಾ ಆತ್ಮಾಹುತಿ ಬಾಂಬರ್ನಿಂದ ಹತ್ಯೆಗೀಡಾಗಿದ್ದರು.