ರಾಜೌರಿಯಲ್ಲಿ ಸ್ಫೋಟ : ಮಗು ಸಾವು, ಐದು ಮಂದಿಗೆ ಗಾಯ…

54
firstsuddi

ಶ್ರೀನಗರ : ಜಮ್ಮು ಕಾಶ್ಮೀರದ ರಾಜೌರಿ ಎಂಬಲ್ಲಿ ಸ್ಫೋಟ ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಗಾಯಗೊಂಡಿರುವ ಐವರ ಪೈಕಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ನಿನ್ನೆ ಇದೇ ಗ್ರಾಮದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂರು ಮನೆಗಳಲ್ಲಿ ದಾಳಿ ನಡೆಸಿದ್ದ ಉಗ್ರರು ನಾಲ್ವರನ್ನು ಕೊಂದಿದ್ದರು. ಉಗ್ರರು ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.