ಹೊಸ ಮಾರ್ಗಸೂಚಿ ಬಗ್ಗೆ ನಾಳೆಯ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಬೊಮ್ಮಾಯಿ.

77
firstsuddi

ಬೆಂಗಳೂರು : ಇಂದು ಅಧಿಕಾರಿಗಳ ಸಭೆ ಕರೆದಿದ್ದೇನೆ. ಈಗ ನವಂಬರ್ ತಿಂಗಳಲ್ಲಿನ ಸಂಪೂರ್ಣವಾದ ಕೋವಿಡ್ ಸ್ಥಿತಿಗತಿ ಸೇರಿದಂತೆ ಎಲ್ಲ ಮಾಹಿತಿಯನ್ನು ಅನೌಪಚಾರಿಕವಾಗಿ ಅಧಿಕಾರಿಗಳಿಂದ ಪಡೆಯಲಿದ್ದೇನೆ. ಇವತ್ತಿನ ಸ್ಥಿತಿಗತಿ ನೋಡಿ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಸತಿ ಶಾಲೆಯಲ್ಲಿ ಕೊವೀಡ್ ಪರಿಸ್ಥಿತಿ ಬಗ್ಗೆ ವಿವರ ಪಡೆಯುತ್ತೇವೆ. ಶಾಲೆ, ಹಾಸ್ಟೆಲ್ ಎಲ್ಲ ಒಳಗೊಂಡಂತೆ ಮಾರ್ಗಸೂಚಿ ಹೊರಡಿಸಲಾಗುವುದು. ಇವತ್ತಿನ ಸ್ಥಿತಿ ಗತಿ ನೋಡಿ, ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಒಮಿಕ್ರಾನ್ ಇದೆ, ಇನ್ನೂ ಕೆಲ ಜಿಲ್ಲೆಗಳಲ್ಲಿ ನಿಯಂತ್ರಣದಲ್ಲಿದೆ. ಹೀಗಾಗಿ ಮಾರ್ಗಸೂಚಿ ತಂದ್ರೆ ಇಡೀ ರಾಜ್ಯಕ್ಕೆ ತರಬೇಕಾಗುತ್ತದೆ. ಕೇಂದ್ರದವ್ರು ಕೂಡ ಕೆಲ ಮಾರ್ಗಸೂಚಿ ಹೊರಡಿಸಿದ್ದಾರೆ. ಹೀಗಾಗಿ ಇವೆಲ್ಲವನ್ನು ಪರಮಾರ್ಶಿಸಿ, ಬರುವಂತ ಡಿಸೆಂಬರ್, ಜನವರಿ ವರೆಗೆ ನಿಯಂತ್ರಣ ಮಾಡಲು ಮಾರ್ಗಸೂಚಿ ಹೊರಡಿಸುತ್ತೇವೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ, ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಕ್ರಿಸ್​ಮಸ್ ಆಚರಣೆ ಮತ್ತು ಹೊಸ ವರ್ಷಾಚರಣೆ ಎದುರಾಗುತ್ತಿದೆ. ಆದರೆ, ಆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಮುಂದೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡುತ್ತೇವೆ. ಯಾರು ಆತಂಕ ಪಡುವ ಸ್ಥಿತಿ ಏನಿಲ್ಲ, ಅಗತ್ಯವೂ ಇಲ್ಲ. ಪೋಷಕರು ಕೂಡ ಆತಂಕ ಪಡಬಾರದು. ಮಕ್ಕಳನ್ನು ಜಾಗೃತರಾಗಿ ನೋಡಿಕೊಳ್ಳಬೇಕು. ಶಾಲೆಯಲ್ಲಿ ಕೊವೀಡ್ ಮಾರ್ಗಸೂಚಿ ಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.